ರಾಜ್ಯಪಾಲರನ್ನೇ ಬಿಟ್ಟು ಹಾರಿದ ಏರ್ ಏಷ್ಯಾ ವಿಮಾನ: ದೂರು ದಾಖಲು
- DoubleClickMedia
- Jul 28, 2023
- 1 min read

ಬೆಂಗಳೂರು ಜು,28 : ವಿಮಾನ ನಿಲ್ದಾಣಕ್ಕೆ 10 ನಿಮಿಷ ತಡವಾಗಿ ಬಂದಿದ್ದಕ್ಕೆ ಹೈದರಾಬಾದ್ ಗೆ ಪ್ರಯಾಣಿಸಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಅವರನ್ನೇ ಬಿಟ್ಟು ಏರ್ ಏಷ್ಯಾ ವಿಮಾನ ಪ್ರಯಾಣ ಬೆಳೆಸಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರ ಕಚೇರಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಹೈದರಾಬಾದ್ ಗೆ ತೆರಳಲು ಗುರುವಾರ ಮಧ್ಯಾಹ್ನ 2 ಗಂಟೆಗೆ ಹೊರಡುವ ಏರ್ ಏಷ್ಯಾ ವಿಮಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಟಿಕೆಟ್ ಬುಕ್ ಮಾಡಲಾಗಿತ್ತು. ಆದರೆ ವಿಮಾನ ನಿಲ್ದಾಣಕ್ಕೆ 10 ನಿಮಿಷ ತಡವಾಗಿ ಆಗಮಿಸಿದ್ದರು. ಹೀಗಾಗಿ ವಿಮಾನ ಗೆಹ್ಲೋಟ್ ಅವರನ್ನು ಬಿಟ್ಟು ಹೋಗಿದೆ. ಈ ಘಟನೆಯಿಂದ ತೀವ್ರ ಮುಜುಗರಕ್ಕೆ ಒಳಗಾಗಿರುವ ರಾಜ್ಯಪಾಲ ಗೆಹ್ಲೊಟ್, ಶಿಷ್ಟಾಚಾರ ಉಲ್ಲಂಘಿಸಿದ ಏರ್ ಏಷ್ಯಾ ಮೇಲೆ ಗರಂ ಆಗಿದ್ದು, ಸಂಸ್ಥೆ ಹಾಗೂ ಕೆಐಎ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಮಧ್ಯಾಹ್ನ 3.30ಕ್ಕೆ ಹೈದರಾಬಾದ್ ಗೆ ಹೊರಡುವ ವಿಮಾನದಲ್ಲಿ ಹೈದರಾಬಾದ್ ಗೆ ತೆರಳಿದ್ದಾರೆ.
Comments