ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
- DoubleClickMedia
- Jul 23, 2023
- 1 min read

ಮಂಗಳೂರು,ಜು.23 : 2023-24ನೇ ಸಾಲಿಗೆ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲು ರೈತ ಹಾಗೂ ರೈತ ಮಹಿಳೆಯರಿಂದ ಆಗಸ್ಟ್ 8ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು:
ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಮೀನುಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಗಾಣಿಕೆ ಚಟುವಟಿಕೆಯಲ್ಲಿ ತೊಡಗಿಕೊಂಡಿರಬೇಕು.
ಅರ್ಹರು ಸಂಬಂಧಿಸಿದ ಒಂದು ಚಟುವಟಿಕೆಗೆ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿಯೊಂದಿಗೆ ಚಟುವಟಿಕೆಯ ಜೆರಾಕ್ಸ್ ಪ್ರತಿ, ಭಾವಚಿತ್ರ, ಸಿ.ಡಿ., ಖರ್ಚು ವೆಚ್ಚಗಳು, ವರಮಾನ ಹಾಗೂ ಪತ್ರಿಕಾ ಪ್ರಕಟಣೆಗಳ ಮಾಹಿತಿ ಇತ್ಯಾದಿಗಳ ಪ್ರತಿಯನ್ನು ಲಗತ್ತಿಸಬೇಕು.
ಆಸಕ್ತ ರೈತರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments