top of page

ಗ್ರಾಮ ಒನ್ ಗೆ ಅರ್ಜಿ ಆಹ್ವಾನ

  • Writer: DoubleClickMedia
    DoubleClickMedia
  • Jul 5, 2023
  • 1 min read

GramaOne

ಮಂಗಳೂರು,ಜೂ.05: ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದ್ದು ಗ್ರಾಮ ಒನ್ ಅನ್ನು ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಯೋಜನೆಯಡಿ ರೂಪಿಸಲಾಗಿದೆ. ಈ ಯೋಜನೆಯಲ್ಲಿ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು.



ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 223 ಗ್ರಾಮ ಪಂಚಾಯಿತಿಗಳಿಗೆ 304 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು, ಈ ಪೈಕಿ ಈಗಾಗಲೇ 252 ಕೇಂದ್ರಗಳನ್ನು ತೆರೆಯಲಾಗಿದೆ. ಪ್ರಸ್ತುತ ಬಾಕಿ ಇರುವ 52 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿರುವುದರಿಂದ ಖಾಲಿ ಇರುವ ಗ್ರಾಮ ಪಂಚಾಯಿತಿಗಳಿಗೆ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



ಅರ್ಹತೆಗಳು:


ಪ್ರಾಂಚೈಸಿ ಅರ್ಜಿದಾರರು ಡಿಪ್ಲೋಮಾ, ಐ,ಟಿ,ಐ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಅಥವಾ ತಾಂತ್ರಿಕ ವಿಭಾಗದಲ್ಲಿ ಪರಿಣತಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿದಾರರು ಸ್ವಂತ ಅಥವಾ ಬಾಡಿಗೆ ಕಟ್ಟಡ ಹೊಂದಿರಬೇಕು ಅಥವಾ ಟೈಲ್ಸ್, ಗ್ರಾನೈಟ್ ಫ್ಲೋರಿಂಗ್, ಆರ್‍ಸಿಸಿ ಛಾವಣಿ ಇತ್ಯಾದಿ ಯಾವುದೇ ನೀರು ಸೋರಿಕೆಯಾಗದ ಕಟ್ಟಡಗಳಲ್ಲಿ ಗ್ರಾಮ ಒನ್ ಕೇಂದ್ರವನ್ನು ಸ್ಥಾಪಿಸಲು ತಯಾರಾಗಿರಬೇಕು. ಆಧಾರ್ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರೆ ಉತ್ತಮ, ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ, ಮಹಿಳೆಯರಿಗೆ ವಿಕಲಚೇತನರಿಗೆ ಹಾಗೂ ತೃತೀಯ ಲಿಂಗಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.



ಅರ್ಜಿಯನ್ನು ವೆಬ್‍ಸೈಟ್ ವಿಳಾಸ https://www.karnatakaone.gov.in ಮೂಲಕ ಇದೇ ಜುಲೈ 7ರೊಳಗೆ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-69008800, 49203888ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments


bottom of page