ಕನ್ನಡ ಪ್ರವೇಶ, ಕಾವ, ಜಾಣ-ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
- DoubleClickMedia
- Jul 12, 2023
- 1 min read

ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
2023ನೇ ಸಾಲಿನ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು 2023ರ ಆಗಸ್ಟ್ 31 ಕೊನೆಯ ದಿನ.
2023ರ ಸೆಪ್ಟೆಂಬರ್ 15ರ ವರೆಗೆ ದಂಡ ಶುಲ್ಕ 50ರೂ. ಗಳನ್ನು ಹೆಚ್ಚುವರಿಯಾಗಿ ಪಾವತಿಸಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು 25ರೂ. ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯ ಮಾರಾಟ ಮಳಿಗೆಯಿಂದ 2023ರ ಜು.1ರಿಂದ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣ www.kasapa.in ಮೂಲಕವೂ ಪಡೆಯಬಹುದು. ಅಂತರ್ಜಾಲದ ಮೂಲಕ ಅರ್ಜಿ ನಮೂನೆ ಪಡೆದವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ 25 ರೂ.ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕಾಗುವುದು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು- 560018, ದೂರವಾಣಿ ಸಂಖ್ಯೆ: 080-26612991, 22423867 ಮತ್ತು 26623584
Comments