ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- DoubleClickMedia
- Jun 20, 2023
- 1 min read
ಮಂಗಳೂರು,ಜೂ.20: 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ ಪದವಿ/ ಸ್ನಾತಕತ್ತೋತರ ಪದವಿ/ ಮೆಡಿಕಲ್/ ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಶೇಕಡ 60% ಕ್ಕಿಂತ ಹೆಚ್ಚು ಅಂಕಗಳಿಸಿ, ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ವೆಬ್‍ಸೈಟ್: www.tw.kar.nic.in ಮೂಲಕ 2023ರ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗೆ ಅರ್ಜಿಯ ಪ್ರತಿಯನ್ನು, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರು (ಗ್ರೇಡ್-1&2), ಸಮಾಜ ಕಲ್ಯಾಣ ಇಲಾಖೆಯ ಕಚೇರಿಗಳಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಕಚೇರಿ ಹಾಗೂ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವಂತೆ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Comments