top of page

24 ಪುಟಗಳ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

  • Writer: DoubleClickMedia
    DoubleClickMedia
  • Jun 8, 2023
  • 1 min read

ree

ಮಂಗಳೂರು 08 ಜೂನ್ : 24 ಪುಟಗಳ ಡೆತ್ ನೋಟ್ ಬರೆದಿಟ್ಟು ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.


ಮೂಲತ: ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ (25) ಆತ್ಮ ಹತ್ಯೆಗೆ ಶರಣಾದ ಯುವತಿ.


ಅಶ್ವಿನಿ ಸಾಮಾನ್ಯ ಕುಟುಂಬದವಳಾಗಿದ್ದು, ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಇತ್ತೀಚೆಗೆ ನೂತನ ಮನೆ ಖರೀದಿಸಿದ್ದ ಅಶ್ವಿನಿ ಅದ್ಧೂರಿ ಗೃಹ ಪ್ರವೇಶವಾಗಿ ಐದೇ ದಿವಸದಲ್ಲಿ ಅದೇ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.


ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು, ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ. ಹಾಗೆಯೇ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು, ತಾನು ಬಳಸುತ್ತಿದ್ದ ಐ ಫೋನನ್ನು ಆತನಿಗೆ ನೀಡಬೇಕೆಂದು ಹೇಳಿದ್ದಾಳೆ.


ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು, ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.


ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಾಳೆ ಎನ್ನಲಾಗಿದ್ದು, ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ.


Comments


bottom of page