ಜುಲೈ 27ಕ್ಕೆ ರಾಜ್ಯದಲ್ಲಿ ಖಾಸಗಿ ಬಸ್, ಆಟೋ, ಟ್ಯಾಕ್ಸಿ ಸಂಘಟನೆಗಳಿಂದ ಬಂದ್‌ಗೆ ಕರೆ
- DoubleClickMedia
- Jul 20, 2023
- 1 min read

ಬೆಂಗಳೂರು, ಜು. 20: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಈಗಾಗಲೇ ರಾಜ್ಯದಲ್ಲಿ ಜಾರಿಯಲ್ಲಿದ್ದು ಕೆಎಸ್ಆರ್ಟಿಸಿ ಬಸ್ ಬೇಡಿಕೆ ಹೆಚ್ಚಾಗಿದೆ.
ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ ಮಾಲೀಕರು ಮತ್ತು ಸಿಬ್ಬಂದಿ ಕಂಗಾಲಾಗಿದ್ದು, ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್‌ಗೆ ಮುಂದಾಗಿವೆ. ಹೀಗಾಗಿ ಜುಲೈ 26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿ 12 ರ ವರೆಗೆ ಓಲಾ, ಉಬರ್, ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್ ಸಂಚಾರ ಇರಲ್ಲ.
ಜುಲೈ 27ರಂದು ಖಾಸಗಿ ಸಾರಿಗೆ ಒಕ್ಕೂಟಗಳು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿವೆ.
Comments