top of page
Writer's pictureDoubleClickMedia

ಬರಲಿದೆ ಬಿಪರ್‌ಜಾಯ್ ಚಂಡಮಾರುತ : ಸಮುದ್ರಕ್ಕೆ ಇಳಿಯದಂತೆ ಅಲರ್ಟ್‌

ಜೂನ್ 06, 2023:

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ಮುಂದಿನ 24 ಗಂಟೆಗಳಲ್ಲಿ ಇದೇ ರೀತಿಯ ವಾಯುಭಾರ ಕುಸಿತ ಮುಂದುವರೆದರೆ ಅದು ಚಂಡಮಾರುತದ ರೂಪ ಪಡೆಯಲಿದ್ದು ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕ ಸಹಿತ ದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬಿಪರ್‌ಜಾಯ್ ಚಂಡಮಾರುತದ ಪ್ರಭಾವದಿಂದ ಮಹಾರಾಷ್ಟ್ರ, ಗುಜರಾತ್‌, ಕರ್ನಾಟಕ ಸೇರಿದಂತೆ ಹಲವೆಡೆ ಜೂನ್ 8 ರಿಂದ ಜೂನ್ 10ರವರೆಗೆ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ.


ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತದಿಂದ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಿದೆ.


ಚಂಡಮಾರುತದ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು, ಪ್ರವಾಸಿಗರು ಸಮುದ್ರ, ನದಿ ತೀರ ಪ್ರದೇಶಗಳಲ್ಲಿ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ತಿಳಿಸಿದೆ.


ಇನ್ನು ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲಬಾರದು. ಅಲ್ಲದೆ ನೆರೆ ಪೀಡಿತ ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ಸೇರಬೇಕು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Comments


bottom of page