ಆಗುಂಬೆ ಘಾಟಿಯಲ್ಲಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಯುವಕ ಸಾವು, ಯುವತಿ ಗಂಭೀರ
- DoubleClickMedia
- Jun 18, 2023
- 1 min read
ಶಿವಮೊಗ್ಗ, ಜೂನ್ 18 2023: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್‌ನಲ್ಲಿ ಸಂಭವಿಸಿದ ಹೃದಯವಿದ್ರಾವಕ ಘಟನೆಯಲ್ಲಿ ದ್ವಿಚಕ್ರವಾಹನ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು ಯುವತಿಯೋರ್ವಳು ತೀವ್ರ ಗಾಯಗೊಂಡಿದ್ದಾಳೆ. ಕೆಟಿಎಂ ಬೈಕ್ ಸವಾರ ಬಾರ್ಕೂರು ಮೂಲದ ಶಶಾಂಕ್ (21) ಅಪಘಾತದಲ್ಲಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ, ನಿರ್ಮಿತಾ(19) ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಶಾಂಕ್ ಹಾಗೂ ನಿರ್ಮಿತಾ ತೀರ್ಥಹಳ್ಳಿಯಿಂದ ಉಡುಪಿಗೆ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತವು ಘಾಟಿಯ 12ನೇ ತಿರುವಿನಲ್ಲಿ ನಡೆದಿದ್ದು, ಹೆಬ್ರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Comentários