ಮಂಡ್ಯ:ಮರಳು ತುಂಬಿದ ಲಾರಿಗೆ ಕಾರು ಡಿಕ್ಕಿ, ನಾಲ್ವರು ಸಾವು
- DoubleClickMedia
- Jun 5, 2023
- 1 min read
ಮಂಡ್ಯ ಜೂನ್ 05, 2023: ಮರಳು ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟ ಘಟನೆ ಭಾನುವಾರ ಮುಂಜಾನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದ ಕಾರಣವನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ತಿರುಮಲಾಪುರ ಗೇಟ್ ಬಳಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ನಾಗಮಂಗಲದಿಂದ ಹಾಸನಕ್ಕೆ ಹೋಗುತ್ತಿದ್ದರು. ಕಾರು ತಿರುಮಲಾಪುರ ಗೇಟ್ ಬಳಿ ಬಂದಾಗ ಚಾಲಕನ ನಿಯಂತ್ರಣ ತಪ್ಪಿ ಮರಳು ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನ ಮುಂಭಾಗ ಗುರುತಿಸಲಾಗದಷ್ಟು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ನಾಗಮಂಗಲ ಉಪ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಲಕ್ಷ್ಮೀ ಪ್ರಸಾದ್, ವೃತ್ತ ನಿರೀಕ್ಷಕ (ಸಿಪಿಐ) ನಿರಂಜನ್ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ಮೃತದೇಹಗಳನ್ನು ಬೆಳ್ಳೂರು ಕ್ರಾಸ್‌ನಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
Comments