ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಆಹಾರದಲ್ಲಿ ಜಿರಳೆ: ಕ್ಷಮೆಯಾಚಿಸಿದ ಐಆರ್ಸಿಟಿಸಿ
- DoubleClickMedia
- Jul 28, 2023
- 1 min read

ದೆಹಲಿ, ಜು 28 : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಲಾದ ಆಹಾರದಲ್ಲಿ ಜಿರಳೆಗಳು ಪತ್ತೆಯಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಮತ್ತು ವಿಷಯ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಐಆರ್ಸಿಟಿಸಿ(ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ) ಆಹಾರ ಸೇವಾ ಪೂರೈಕೆದಾರರಿಗೆ ಭಾರಿ ದಂಡವನ್ನು ವಿಧಿಸಿದೆ.
ಭೋಪಾಲ್‌ನಿಂದ ಗ್ವಾಲಿಯರ್‌ಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಚಪಾತಿಯಲ್ಲಿ ಈ ಕೀಟ ಸಿಕ್ಕಿದೆ. ಅವರು ಚಪಾತಿಯ ಫೋಟೋಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಫೋಟೋವನ್ನು ಶೇರ್ ಮಾಡಿದ ತಕ್ಷಣ, ಘಟನೆಯ ಬಗ್ಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ ಮತ್ತು ಘಟನೆಯ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಪ್ರಯಾಣಿಕರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಐಆರ್ಸಿಟಿಸಿಯು ಅಹಿತಕರ ಅನುಭವಕ್ಕಾಗಿ ಕ್ಷಮೆಯಾಚಿಸಿದ್ದು ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಆಹಾರ ತಯಾರಿಕೆಯ ಸಮಯದಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಸೇವಾ ಪೂರೈಕೆದಾರರಿಗೆ ಕಟ್ಟುನಿಟ್ಟಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದೆ.
Commenti