ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಉಸ್ತುವಾರಿ ಸಚಿವರಾಗಿ ನೇಮಕ
- DoubleClickMedia
- Jun 9, 2023
- 1 min read

ಮಂಗಳೂರು ಜೂ 9: ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಜಿಲ್ಲೆಗಳ ಉಸ್ತುವಾರಿ ಸ್ಥಾನಕ್ಕೆ ಬಹಳ ಪೈಪೋಟಿ ನಡೆದಿತ್ತು.ಈದೀಗ ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ.
ಗಾಂಧಿನಗರ ಕ್ಷೇತ್ರದ ಶಾಸಕರಾದ ದಿನೇಶ್ ಗುಂಡೂರಾವ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾಗಿದ್ದಾರೆ.
Comments