top of page

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಸಿಎಂ, ಡಿಸಿಎಂ ನಿಂದ ಚಾಲನೆ

  • Writer: DoubleClickMedia
    DoubleClickMedia
  • Jul 10, 2023
  • 1 min read

AnnaBaghya

ಬೆಂಗಳೂರು ಜು.10 : ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು. ಇದೇ ವೇಳೆ ಯೋಜನೆಯ ಲೋಗೋ ಕೂಡ ಬಿಡುಗಡೆ ಮಾಡಲಾಯಿತು.



ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ 10 ಕೆಜಿ ಅಕ್ಕಿಯ ಪೈಕಿ ಐದು ಕೆಜಿ ಅಕ್ಕಿಯ 170 ರೂ. ಹಣವನ್ನು ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಾಕುವ ಮೂಲಕ ಚಾಲನೆ ನೀಡಿದರು.


ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ​ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದು ಮನಮೋಹನ್​ ಸಿಂಗ್ ನೇತೃತ್ವದ ಯುಪಿಎ ಸರ್ಕಾರ. ಮೊದಲ ಸಂಪುಟದಲ್ಲೇ ಐದು ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿದ್ದೆವು. ನಮ್ಮ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಯೋಜನೆ. ರಾಜ್ಯದ 1.28 ಕೋಟಿ ಕುಟುಂಬಕ್ಕೆ ಅನ್ನಭಾಗ್ಯ ಯೋಜನೆ ತಲುಪುತ್ತದೆ. ರಾಜ್ಯದ 4.42 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ ಎಂದು ಹೇಳಿದರು.



ಅಂತ್ಯೋದಯ, BPL ಕಾರ್ಡ್​ದಾರರು ಸೇರಿ 4.42 ಕೋಟಿ ಜನರಿಗೆ ಅನುಕೂಲವಾಗಲಿದೆ. ನಾವು ಹೆಚ್ಚುವರಿಯಾಗಿ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಅಂತಾ ಹೇಳಿಲ್ಲ. ಒಟ್ಟು 10 ಕೆಜಿ ಅಕ್ಕಿ ಕೊಡಲಿದ್ದೇವೆ.ಅನ್ನ ಭಾಗ್ಯ ಹೊಸ ಕಾರ್ಯಕ್ರಮ ಏನೂ ಅಲ್ಲ. ನಾವು 2013ರಲ್ಲಿ ಅಧಿಕಾರಕ್ಕೆ ಬಂದಾಗ ಪ್ರಾರಂಭಿಸಿದ್ದೆವು. ಜನರಿಗೆ ಏನು ಭರವಸೆ ಕೊಟ್ಟಿದ್ದೆವು ಅದನ್ನು ಈಡೇರಿಸಬೇಕು. ಜನರಿಗೆ ದ್ರೋಹ ಮಾಡಬಾರದು ಅಂತ ಪ್ರಮಾಣ ವಚನ ವಹಿಸಿಕೊಂಡ ಮೊದಲ ದಿನವೇ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೆವು ಎಂದು ಸಿಎಂ ಹೇಳಿದರು.



Comments


bottom of page