top of page
  • Writer's pictureDoubleClickMedia

ಸಿದ್ದರಾಮಯ್ಯ ಆಪ್ತೆ, ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ವಿರುದ್ಧ ಎಫ್‌ಐಆರ್‌ ದಾಖಲು


Dr. Mallika Ghanti

ವಿಜಯನಗರ, ಆಗಸ್ಟ್ 02: ಅಧಿಕಾರ ದುರುಪಯೋಗ ಮಾಡಿಕೊಂಡು, ವಿಶ್ವವಿದ್ಯಾಲಯಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾಘಂಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.



ವಿಶ್ವವಿದ್ಯಾಲಯಕ್ಕೆ ಆರ್ಥಿಕ ನಷ್ಟ ಉಂಟು ಮಾಡುವುದರೊಂದಿಗೆ ಉದ್ದೇಶಪೂರ್ವಕವಾಗಿ ಕೆಟಿಪಿಪಿ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಆರೋಪಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಸುಬ್ಬಣ್ಣ ರೈ ದೂರು ನೀಡಿದ್ದಾರೆ. ಇವರ ದೂರಿನ ಮೇರೆಗೆ ಇದೀಗ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.


015-16 ಮತ್ತು 2016-17ರ ಸಾಲಿನಲ್ಲಿ ಕೆಲ ಕಾಮಗಾರಿ ಮಾಡಿದ್ದಾರೆ. ಈ ವೇಳೆ ವಿಶ್ವವಿದ್ಯಾಲಯಕ್ಕೆ 13.56 ಲಕ್ಷ ರೂ. ಆರ್ಥಿಕ ನಷ್ಟ ಮಾಡಲಾಗಿದೆ. ಇದರೊಂದಿಗೆ ಉದ್ದೇಶಪೂರ್ವಕವಾಗಿ ಕೆಟಿಪಿಪಿ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಹಂಪಿ ಕನ್ನಡ ವಿವಿಯ ಕುಲಸಚಿವ ಸುಬ್ಬಣ್ಣ ರೈ ದೂರಿನಲ್ಲಿ ಉಲ್ಲೇಖಿಸಿದ್ದಾರೆ.



ಹಂಪಿ ವಿಶ್ವವಿದ್ಯಾಲಯದಲ್ಲಿ 2025ರಿಂದ 2019ರ ವರೆಗೆ 50.86 ಕೋಟಿ ರೂಪಾಯಿ ಮೊತ್ತದ ಕಾಮಗಾರಿಯನ್ನು ಇ-ಟೆಂಡರ್​ ಇಲ್ಲದೇ ಕೈಗೊಂಡಿದ್ದಾರೆ. ಇದರೊಂದಿಗೆ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ (ಕೆಟಿಸಿಪಿ) ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.



ಇದೇ ವಿಚಾರವಾಗಿ ಹಂಪಿ ವಿಶ್ವವಿದ್ಯಾಯಲದ ಅಂದಿನ ಕಾನೂನ ಘಟಕದ ಸೂಪರಿಡೆಂಟ್​ ಹೆಚ್​ಎಂ ಸೊಮನಾಥ್ ಎನ್ನುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಬಳಿಕ ಲೋಕಾಯುಯುಕ್ತ ಈ ಬಗ್ಗೆ ತನಿಖೆ ನಡೆಸಿ 2021ರಲ್ಲಿ ರಾಜ್ಯ ಸರ್ಕಾರಕ್ಕೆ ಅಂತಿಮ ವರದಿ ನೀಡಿತ್ತು. ಕೆಟಿಪಿಪಿ ಉಲ್ಲಂಘನೆಯಾಗಿದೆ ಎಂದು ವರದಿಯಲ್ಲಿ ತಿಳಿಸಿತ್ತು. ಆದರೂ ವಿಶ್ವವಿದ್ಯಾಲಯ ದೂರು ದಾಖಲಿಸಲು ಹಿಂದೇಟು ಹಾಕಿತ್ತು ಎನ್ನುವ ಆರೋಪಗಳು ಕೇಳಿಬಂದಿದ್ದವು.


ಇನ್ನುವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಲ್ಲೊಬ್ಬರು.



Comments


bottom of page