ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದ ಒಂದೇ ಕುಟುಂಬದ ಐದು ತಲೆಮಾರು
- DoubleClickMedia
- Aug 8, 2023
- 1 min read

ಮಂಗಳೂರು,ಆಗಸ್ಟ್ 8: ಮಂಗಳೂರು ಮೂಲದ ಒಂದೇ ಕುಟುಂಬದ ಐದು ತಲೆಮಾರಿನ ಮಹಿಳೆಯರು ಉಳಿತಾಯ ಖಾತೆಯನ್ನು ತೆರೆದಿದ್ದು, ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದ ಭಾರತದ ಏಕೈಕ ಐದು ತಲೆಮಾರಿನ ಕುಟುಂಬ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆಗಸ್ಟ್ 3 ರಂದು ಮಂಗಳೂರು ಸಮೀಪದ ಕಿನ್ನಿಗೋಳಿ ಉಪ ಅಂಚೆ ಕಚೇರಿಯಲ್ಲಿ ಮಹಿಳಾ ಸಮ್ಮಾನ್ ಅಡಿಯಲ್ಲಿ ಒಂದೇ ಕುಟುಂಬದ ಐದು ತಲೆಮಾರು ಉಳಿತಾಯ ಖಾತೆಗಳನ್ನು ತೆರೆದಿದ್ದಾರೆ.
ಕುಪ್ಪೆಪದವು ನಿವಾಸಿ ಸೀತಾ ಪೂಜಾರ್ತಿ (103), ಕೈಕಂಬದಲ್ಲಿ ವಾಸವಾಗಿರುವ ಅವರ ಪುತ್ರಿ ಸುಂದರಿ ಪೂಜಾರ್ತಿ (72), ಉಲ್ಲೈ ಬೇತು ನಿವಾಸಿಯಾಗಿರುವ ಯಮುನಾ ಪೂರ್ಜಾರ್ತಿ (50) ಸೀತಾ ಪೂಜಾರ್ತಿ ಅವರ ಮೊಮ್ಮಗಳು. ಸೀತಾ ಪೂಜಾರ್ತಿ ಅವರ ಮರಿ ಮೊಮ್ಮಗಳು ಪವಿತ್ರಾ ವಿ ಅಮೀನ್ (33) ಮತ್ತು ಅವರ ಗಿರಿ ಮೊಮ್ಮಗಳು ದಿತ್ಯಾ ವಿ ಅಮೀನ್ (3). ಇವರು ಆರ್ಥಿಕ ಸಬಲೀಕರಣದ ಉದ್ದೇಶದಿಂದ ಎಮ್ಎಸ್ಎಸ್ಸಿ ಅಡಿಯಲ್ಲಿ ಉಳಿತಾಯ ಖಾತೆಗಳನ್ನು ತೆರೆದಿದ್ದಾರೆ.
Comments