ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರರ ಬಂಧನ
- DoubleClickMedia
- Jul 19, 2023
- 1 min read

ಬೆಂಗಳೂರು, ಜುಲೈ.19: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್, ಜೀವಂತ ಗುಂಡು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಈ ಕುರಿತು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕೆಲವು ಪ್ರಮುಖ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ವಿಧ್ವಾಂಸಕ ಕೃತ್ಯ ಎಸಗಲು ಪ್ಲಾನ್ ಮಾಡಿದ್ದವರನ್ನು ಬಂಧಿಸಲಾಗಿದೆ. ಇದರೊಂದಿಗೆ ಅವರ ಪ್ಲ್ಯಾನ್ ವಿಫಲಗೊಳಿಸಲಾಗಿದೆ. ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಐದು ಜನರ ಮನೆ ಮೇಲೆ ದಾಳಿ ಮಾಡಲಾಗಿದ್ದು, ಏಳು ಪಿಸ್ತೂಲ್ 45 ಗುಂಡು, ಹನ್ನೆರಡು ಮೊಬೈಲ್ ಫೋನ್, ಡ್ರ್ಯ್ಯಾಗರ್, ವಾಕಿ ಟಾಕಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಬಂಧಿತರು ಬೆಂಗಳೂರು ನಗರದಲ್ಲಿ ಕೃತ್ಯವೆಸಗಲು ಪ್ಲ್ಯಾನ್ ಮಾಡಿದ್ದರು. ವಿದೇಶದಿಂದ ವಿಧ್ವಂಸಕ ಕೃತ್ಯಕ್ಕೆ ವಿದೇಶದಿಂದ ಫಂಡಿಂಗ್ ಆಗುತ್ತಿತ್ತು ಎಂದು ಮಾಹಿತಿ ನೀಡಿದರು.
ಈ ಐದು ಮಂದಿ ಆರ್‌ಟಿ ನಗರದಲ್ಲಿ 2017ರಲ್ಲಿ ನಡೆದಿದ್ದ ಕೊಲೆ ಪ್ರಕರಣ ಆರೋಪಿಗಳಾಗಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಜೈಲಿನಲ್ಲಿದ್ದುಕೊಂಡೇ ಉಗ್ರರ ಸಂಪರ್ಕ ಬೆಳಸಿಕೊಂಡಿದ್ದರು ಎಂದು ಸಿಸಿಬಿ ಹೇಳಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.
Comments