ವಿಮಾನ ತುರ್ತು ಭೂಸ್ಪರ್ಶ: ಇಂಡಿಗೋ ವಿಮಾನದಲ್ಲಿ ರಕ್ತ ವಾಂತಿ ಮಾಡಿಕೊಂಡ ಪ್ರಯಾಣಿಕ
- DoubleClickMedia
- Aug 22, 2023
- 1 min read

ಮಹಾರಾಷ್ಟ್ರ, ಆಗಸ್ಟ್ 22: ಇಂಡಿಗೋ ವಿಮಾನಯಾನ ಸಂಸ್ಥೆಯ ಮುಂಬೈ-ರಾಂಚಿ ವಿಮಾನವು ಪ್ರಯಾಣಿಕರೊಬ್ಬರ ವೈದ್ಯಕೀಯ ತುರ್ತು ಪರಿಸ್ಥಿತಿ ಇಂದಾಗಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಪ್ರಯಾಣಿಕರೊಬ್ಬರು ವಿಮಾನದಲ್ಲಿ ರಕ್ತ ವಾಂತಿ ಮಾಡಿಕೊಂಡಿದ್ದರು, ಕೂಡಲೇ ವಿಮಾನವನ್ನು ನಾಗ್ಪುರದಲ್ಲಿ ತುರ್ತು ಲ್ಯಾಡಿಂಗ್ ಮಾಡಿ, ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೀವ ಉಳಿಸಲು ಸಾಧ್ಯವಾಗಿಲ್ಲ.
ಸೋಮವಾರ ಆಗಸ್ಟ್ 21 ರಾತ್ರಿ 8 ಗಂಟೆ ಸುಮಾರಿಗೆ ಇಂಡಿಗೋ ವಿಮಾನದಲ್ಲಿದ್ದ (6E 5093) 62 ವರ್ಷದ ಡಿ ತಿವಾರಿ ಎಂಬ ಪ್ರಯಾಣಿಕ ಕಿಡ್ನಿ ಮತ್ತು ಕ್ಷಯರೋಗದಿಂದ ಬಳಲುತ್ತಿದ್ದು, ವಿಮಾನದಲ್ಲಿ ರಕ್ತ ವಾಂತಿ ಮಾಡಿಕೊಂಡಿದ್ದಾರೆ . ಹೀಗಾಗಿ ಮುಂಬೈನಿಂದ ರಾಂಚಿಗೆ
ತೆರಳುತ್ತಿದ್ದ ವಿಮಾನವು ನಾಗ್ಪುರದ ಬಾಬಾಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಪ್ರಯಾಣಿಕನನ್ನು ಕೂಡಲೇ ಸರ್ಕಾರಿ ವೈದ್ಯಕೀಯ ಕಾಲೇಜು-ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ತಿವಾರಿ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.
Comments