
ನವದೆಹಲಿ, ಆಗಸ್ಟ್ 29: 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿ ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
ಮುಂದಿನ 24 ಗಂಟೆಗಳಲ್ಲಿ, ಅಂದರೆ ಆಗಸ್ಟ್ 30ರಂದು ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ ನಿರ್ಧಾರ ಪ್ರಟಿಸಬಹುದು ಎಂದು ಮೂಲಗಳು ತಿಳಿಸಿವೆ.
ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಕಂಪನಿಗಳಿಗೆ ಸಬ್ಸಿಡಿ ಹಣ ಸಿಗಲಿದೆ.
Comments