ರಾಜ್ಯದಲ್ಲಿ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ
- DoubleClickMedia
- Jul 26, 2023
- 1 min read

ಬೆಂಗಳೂರು, ಜು 26: ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾಗಮಂಡಲ, ಕ್ಯಾಸಲ್ರಾಕ್, ಮುಲ್ಕಿ, ಸುಬ್ರಹ್ಮಣ್ಯ, ಕೊಟ್ಟಿಗೆಹಾರ, ಸುಳ್ಯ, ಗೇರುಸೊಪ್ಪ, ಶಿರಾಲಿ, ಮಾಣಿ, ಲಿಂಗನಮಕ್ಕಿ, ಜಯಪುರ, ಉಪ್ಪಿನಂಗಡಿ, ಮಂಗಳೂರು, ಪುತ್ತೂರು, ಪಣಂಬೂರು, ಕೊಲ್ಲೂರು, ಶೃಂಗೇರಿಯಲ್ಲಿ ಭಾರಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಬೀದರ್, ಕಲಬುರಗಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
Comments