ಬಸ್ ಕಾರು ಮಧ್ಯೆ ಹೆಬ್ರಿ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಶಿಕ್ಷಕರು ಸಾವು
- DoubleClickMedia
- Jun 11, 2023
- 1 min read

ಉಡುಪಿ ಜೂ 11: ಹೆಬ್ರಿ ಸಮೀಪದ ಸೀತಾನದಿ ಜಕ್ಕಮಕ್ಕಿ ಬಳಿ ಬಸ್ಸು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭಸಿದ್ದು, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವನ್ನಪಿದ್ದಾರೆ.
ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಮಧ್ಯಾಹ್ನ 1.30 ರ ವೇಳೆಗೆ ಅಪಘಾತ ನಡೆದಿದೆ.
ಮೃತರನ್ನು ಉಡುಪಿ ಶಿಕ್ಷಣ ಇಲಾಖೆಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ, ಸೋಮಶೇಖರ್ ಎಂದು ಗುರುತಿಸಲಾಗಿದೆ. ಇವರೊಂದಿಗೆ ಕಾರಿನಲ್ಲಿದ್ದ ಶಿಕ್ಷಕ ಸುದರ್ಶನ ಹಾಗೂ ಕಾರು ಚಾಲಕ ಸತೀಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಿಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು. ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.
Comments