ರೇಷನ್ ಕಾರ್ಡ್‌ನಲ್ಲಿ ಮನೆ ಯಜಮಾನಿ ಹೆಸರು ಬದಲಾವಣೆ ಮಾಡುವುದು ಹೇಗೆ?
- DoubleClickMedia
- Jul 27, 2023
- 1 min read

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ 4ನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆ (ಮನೆ ಯಜಮಾನಿಗೆ 2000 ರೂ. ಹಣ) ಜಾರಿಗೊಳಿಸಲಾಗಿದೆ. ಆದರೆ, ಇದಕ್ಕೆ ಪಡಿತರ ಚೀಟಿ (ರೇಷನ್ ಕಾರ್ಡ್)ಯಲ್ಲಿ ಮಹಿಳೆಯೇ ಮನೆಯ ಯಜಮಾನಿ ಆಗಿರಬೇಕು. ಈ ಹಿನ್ನೆಲೆಯಲ್ಲಿ ರೇಷನ್‌ಕಾರ್ಡ್‌ನಲ್ಲಿ ಮನೆ ಯಜಮಾನಿ ಬದಲಾವಣೆಗೆ ಅವಕಾಶ ನೀಡಲಾಗಿದೆ.
ರೇಷನ್ ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆಗೆ ಮಾಡುವುದು ಹೇಗೆ?
*ಮೊದಲಿಗೆ ಸಮೀಪದ ಪಡಿತರ ಚೀಟಿ ಸೇವಾಕೇಂದ್ರಗಳಿಗೆ ಭೇಟಿ ನೀಡಿರಿ
*ಮುಖ್ಯಸ್ಥರ ಹೆಸರು ಬದಲಾವಣೆ ಮಾಡುವುದಕ್ಕೆ ಅರ್ಜಿಯನ್ನು ಭರ್ತಿ ಮಾಡಿ
* ಅರ್ಜಿಯೊಂದಿಗೆ ಅಗತ್ಯವಿರುವ ದಾಖಲೆಗಳನ್ನು ಕೂಡಾ ಸಲ್ಲಿಸಿ.
* ಬಯೋಮೆಟ್ರಿಕ್ ದೃಡೀಕರಣದ ಮೂಲಕ ದಾಖಲೆಗಳನ್ನು ದೃಢೀಕರಿಸಿ
*ಪಡಿತರ ಸೇವಾ ಕೇಂದ್ರದಲ್ಲಿ ಎಲ್ಲ ಮಾಹಿತಿಯನ್ನು ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಲಾಗುತ್ತದೆ.
* ಅಲ್ಲಿ ನೀಡಲಾಗುವ ಸ್ವೀಕೃತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿರಿ
* ಅದಾದ ಬಳಿಕ ಆಹಾರ ಕಚೇರಿಯಲ್ಲಿ ನಿಮಗೆ ಎಸ್‌ಎಂಎಸ್ ಬರಲಿದೆ
* ಎಸ್‌ಎಂಎಸ್ ಬಂದ ಬಳಿಕ ನಿಮ್ಮಲ್ಲಿರುವ ಸ್ವೀಕೃತಿ ಪತ್ರ ಬಳಸಿಕೊಂಡು ನಿಮ್ಮ ಪಡಿತರ ಚೀಟಿಯನ್ನು ಪ್ರಿಂಟ್ ತೆಗೆದುಕೊಳ್ಳಬಹುದು.
ಆನ್‌ಲೈನ್‌ನಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಹೇಗೆ?
*ಮೊದಲಿಗೆ https://ahara.kar.nic.in/ ಗೆ ಲಾಗ್ ಇನ್ ಆಗಿ
*ಮೇನ್ ಪೇಜ್‌ನಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ (https://ahara.kar.nic.in/lpg/) ಈ ಲಿಂಕ್ ತೆರೆದುಕೊಳ್ಳಲಿದೆ.
*ಬಳಿಕ ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆ ಕಾಣಿಸಲಿದೆ, ಅಲ್ಲಿ ಕ್ಲಿಕ್ ಮಾಡಿರಿ
*ಈಗ ಹೊಸ ಪೇಜ್ ತೆರೆಯಲಿದೆ.
*ನಿಮ್ಮ ಜಿಲ್ಲೆಗೆ ಅನುಗುಣವಾಗಿ ಕಾಣಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ
*ಹೊಸ ಸೇರ್ಪಡೆ/ ತಿದ್ದುಪಡಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
*ತಿದ್ದುಪಡಿಗೆ ಬೇಕಾದ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ.
*ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್‌ಮಿಟ್ ಮಾಡಿರಿ.
*ಅರ್ಜಿ ಸಲ್ಲಿಕೆಯ ರಿಜಿಸ್ಟರ್ ನಂಬರ್ ಸಿಗಲಿದೆ. ಈ ನಂಬರ್ ಮೂಲಕ ನಿಮ್ಮ ಅರ್ಜಿಯ ಸ್ಟೇಟಸ್ ಅನ್ನು ಟ್ರ್ಯಾಕ್ ಮಾಡಬಹುದು.
Comments