top of page

ಉಚಿತ ಅಕ್ಕಿ ಕೊಡಲಾಗದಿದ್ದರೆ ಅಧಿಕಾರ ಬಿಟ್ಟುಕೊಡಿ: ಶೋಭಾ ಕರಂದ್ಲಾಜೆ

  • Writer: DoubleClickMedia
    DoubleClickMedia
  • Jun 21, 2023
  • 1 min read

Shobhakarandhlaje

ಚಿಕ್ಕಮಗಳೂರು, ಜೂ.21: ರಾಜ್ಯದ ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ರೆ ಅಧಿಕಾರ ಬಿಟ್ಟುಕೊಡಿ ಎಂದು ರಾಜ್ಯ ಕಾಂಗ್ರೆಸ್‌ ನಾಯಕರ ವಿರುದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಯೋಜನೆಗಳನ್ನು ಘೋಷಿಸುವಾಗ ತಲೆಯಲ್ಲಿ ಮೆದುಳು ಇರಲಿಲ್ವಾ, ಆವಾಗ ಸಗಣಿ ತುಂಬಿತ್ತಾ?, ಕೇಂದ್ರದ ಅಕ್ಕಿ ಸೇರಿ ರಾಜ್ಯದ ಜನರಿಗೆ ಒಟ್ಟು 15 ಕೆಜಿ ಅಕ್ಕಿ ಕೊಡಿ. ಚುನಾವಣೆ ಗೆಲ್ಲಲು ಕಾಂಗ್ರೆಸ್​ನವರು ಸುಳ್ಳು ಭರವಸೆ ಕೊಟ್ಟು ಆಸೆ ತೋರಿಸಿದ್ದಾರೆ. ಸಿದ್ದರಾಮಯ್ಯನವರೇ ಬೇಜವಾಬ್ದಾರಿ ಹೇಳಿಕೆ ವಾಪಸ್​ ತೆಗೆದುಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಗೆಲ್ಲಲು ಸುಳ್ಳು ಗ್ಯಾರಂಟಿ ಘೋಷಣೆ ಮಾಡಿದ್ದೀರಿ, ಮಹಿಳೆಯರು ಬಸ್ ಪಾಸ್ ಪಡೆಯಲು ಸರ್ಟಿಫಿಕೇಟ್ ಕೇಳುತ್ತಿದ್ದಾರೆ. ನಾನು ಮಹಿಳೆ ಎನ್ನುವುದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ. ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ತೋರಿಸುತ್ತಿದ್ದೀರಿ. ಹಾಗಾದರೆ ನೀವು ಗ್ಯಾರಂಟಿ ಕಾರ್ಡ್ ಏಕೆ ವಿತರಣೆ ಮಾಡಿದ್ದೀರಿ. ಬೇರೆ ರಾಜ್ಯ, ನಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸಿ ರಾಜ್ಯದ ಜನರಿಗೆ ಕೊಡಿ. ರಾಜ್ಯದಲ್ಲಿ ಆರಾಜಕತೆ ತುಂಬಿದೆ. ವಿದ್ಯುತ್ ‌ಬಿಲ್ ಹೆಚ್ಚಾಗಿದೆ. ಒಬ್ಬ ಮರ್ಯಾದೆ ಇಲ್ಲದ, ಬೇಜವಾಬ್ದಾರಿ ಮುಖ್ಯಮಂತ್ರಿಗಳಂತೆ ಸಿದ್ದರಾಮಯ್ಯ ಅವರು ಮೋದಿ ಕೊಡಲ್ಲ ಎಂದು ಹೇಳುತ್ತಿದ್ದಾರೆ. ಕೇಂದ್ರದಲ್ಲಿ ಬಫರ್ ಸ್ಟಾಕ್ ಇರುವುದು ದೇಶಕ್ಕೆ ಆಪತ್ತು ಬಂದಾಗ ಉಪಯೋಗಿಸಲು. ಗ್ಯಾರಂಟಿ ಹೆಸರಲ್ಲಿ ವೋಟು ತಗೆದುಕೊಂಡು ಆಡಳಿತ ನಡೆಸಲು ಸಿದ್ದರಾಮಯ್ಯಗೆ ಯೋಗ್ಯತೆ ಇಲ್ಲ , ಕೇಂದ್ರ ಸರ್ಕಾರದ ಐದು ಕೆಜಿ ಅಕ್ಕಿ ಸೇರಿದಂತೆ ರಾಜ್ಯದ ಜನತೆಗೆ 15 ಕೆ.ಜಿ ಅಕ್ಕಿ ನೀಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.


ಈ ಹಿಂದೆ ನೀವು ನಿಮ್ಮ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗಲೇ ನಾವು ಅವತ್ತೇ ನಿಮ್ಮನ್ನು ಕೇಳಿದ್ವಿ. ಇವುಗಳಿಗೆಲ್ಲಾ ಹಣ ಎಲ್ಲಿಂದ ತರುತ್ತೀರಿ ಎಂದು ಪ್ರಶ್ನಿಸಿದ್ದೆವು. ಆದರೆ, ಇವತ್ತು ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ಬೆರಳು ಮಾಡಿ ತೋರಿಸುತ್ತಿದ್ದೀರಿ. ಯಾರಿಗೆ ಮೋಸ ಮಾಡಲು, ಯಾರ ಮೂಗಿಗೆ ತುಪ್ಪ ಸವರಲು ಯೋಜನೆಗಳನ್ನು ಘೋಷಣೆ ಮಾಡಿದ್ದೀರಾ? ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಿದ್ದರಾಮಯ್ಯ ಅವರನ್ನ ಪ್ರಶ್ನಿಸಿದ್ದಾರೆ.

Comments


bottom of page