ಅಕ್ರಮ ಆಸ್ತಿ ಪ್ರಕರಣ: ತಹಶೀಲ್ದಾರ್ ಅಜಿತ್ ಕುಮಾರ್ ರೈ ಜಾಮೀನು
- DoubleClickMedia
- Aug 14, 2023
- 1 min read

ಬೆಂಗಳೂರು ಆ. 8: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ಕುಮಾರ್ ರೈಗೆ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
ಜಾಮೀನು ಮಂಜೂರು ಮಾಡುವಂತೆ ಕೋರಿ ಸಿಟಿ ಸಿವಿಲ್ ಕೋರ್ಟ್ಗೆ ಅಜಿತ್ ಕುಮಾರ್ ರೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರಾಧಾಕೃಷ್ಣ ಅವರು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿ ಷರತ್ತುಬದ್ಧ ಜಾಮೀನು ನೀಡಿದ್ದಾರೆ.
ಅಜಿತ್ ಕುಮಾರ್ ರೈ ಈ ಹಿಂದೆ ಜಾಮೀನು ಮಂಜೂರು ಮಾಡುವಂತೆ ಕೋರಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೆಲವುಗ ಕಾಲ ನ್ಯಾಯಾಲಯವು ಅಜಿತ್ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿ ತನಿಖಾ ತಂಡದ ವಶಕ್ಕೆ ನೀಡಿತ್ತು.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರ ಮನೆ ಮೇಲೆ ದಾಳಿ ಮಾಡಿತ್ತು. ತನಿಖೆಗೆ ಸಹಕರಿಸದ ಆರೋಪದ ಮೇಲೆ ಜೂನ್ 29ರಂದು ಅವರನ್ನು ವಶಕ್ಕೆ ಪಡೆಯಲಾಗಿತ್ತು.
Comments