ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇನ್ಮುಂದೆ ಹೊಸ ರೂಲ್ಸ್ ಉಲ್ಲಂಘಿಸಿದ್ರೆ ದಂಡ ಫಿಕ್ಸ್
- DoubleClickMedia
- Aug 17, 2023
- 1 min read

ಮೈಸೂರು, ಆಗಸ್ಟ್ 17: ಮೈಸೂರಿನ ಚಾಮುಂಡಿಬೆಟ್ಟಕ್ಕೆ ದೇವರ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು ಬರುತ್ತಿದ್ದು, ಅವರು ತಿನ್ನುವ ತಿಂಡಿ ಪೊಟ್ಟಣ, ಬಿಸ್ಕತ್ ಕವರ್‌ಗಳು, ನೀರು, ಜ್ಯೂಸ್ ಬಾಟಲಿಗಳು ರಸ್ತೆಯ ಇಕ್ಕೆಲಗಳಲ್ಲಿ ಬಿದ್ದು, ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ. ಎಲ್ಲೆಂದರಲ್ಲಿ ಕಸದ ರಾಶಿಯನ್ನೇ ಹಾಕಲಾಗುತ್ತಿದೆ. ಇದರಿಂದ ಎಚ್ಚೆತ್ತಕೊಂಡಿರುವ ಮೈಸೂರು ಅರಣ್ಯ ಇಲಾಖೆ ಚಾಮುಂಡಿಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.
ಚಾಮುಂಡಿಬೆಟ್ಟ ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಪ್ಲಾಸ್ಟಿಕ್ ಬಿಸಾಕಿದರೆ 500 ರೂ ದಂಡ. ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ದಂಡ, ಎರಡನೇ ಬಾರಿಗೆ 5 ಸಾವಿರ ರೂ. ಇನ್ನು ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಚಾಮುಂಡಿಬೆಟ್ಟದ ಅಂಗಡಿಯವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಸೆಪ್ಟೆಂಬರ್ 1 ರಿಂದ ಆದೇಶ ಜಾರಿಗೆ ಬರಲಿದೆ.
Comments