top of page
  • Writer's pictureDoubleClickMedia

ಕಿಸಾನ್‌ ಸಮ್ಮಾನ್‌: ಇ - ಕೆವೈಸಿ ಅಪ್​​ಡೇಟ್ ಮಾಡಲು ಜೂನ್‌ 30 ಕೊನೆ ದಿನ


Kisan Samman

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಫಲಾನುಭವಿಗಳಾಗಲು ಎಲ್ಲಾ ರೈತರು ಇ-ಕೆವೈಸಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ರೈತರು ಜೂನ್ 30ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಕೃಷಿ ಇಲಾಖೆ ಸೂಚನೆ ನೀಡಿದೆ.


ಕೇಂದ್ರ ಸರ್ಕಾರದ ಪಿಎಂ-ಕಿಸಾನ್ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ಪಿಎಂ-ಕಿಸಾನ್ ಯೋಜನೆಯ ನೆರವು ಅರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಇ-ಕೆವೈಸಿ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.



ಫಲಾನುಭವಿಗಳು https://pmkisan.gov.in ವೆಬ್‌ಸೈಟ್‌ಗೆ ಭೇಟಿ . ಫಾರ್ಮರ್ಸ್ ಕಾರ್ನರ್‌ಗೆ ಕ್ಲಿಕ್‌ ಮಾಡಿ ಅದರಲ್ಲಿರುವ ಇ-ಕೆವೈಸಿ ಎಂದು ಆಯ್ಕೆ ಮಾಡಿ, ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್‍ಗೆ ಒಟಿಪಿ ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್‍ನಲ್ಲಿ ದಾಖಲಿಸಿ ಸಬ್‍ಮಿಟ್ ಫಾರ್ ಆಥ್ ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ ಕೆವೈಸಿ ಇಸ್‌ ಸಬ್‌ಮಿಟೆಡ್‌ ಎಂದು ಬರುತ್ತದೆ.


ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. ಹಾಗೆಯೇ ಮೊಬೈಲ್ ತಂತ್ರಾಂಶದ ಮೂಲಕ ಫಲಾನುಭವಿಗಳೇ ತಮ್ಮ ಮುಖ ಚಹರೆ ತೋರಿಸಿ-ಕೆವೈಸಿ ಅಪ್​​​ಡೇಟ್​ ಮಾಡಬಹುದು.



ಒಂದು ವೇಳೆ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿಗಾಗಿ ಕಳುಹಿಸಿದ ಒಟಿಪಿಯು ಸ್ವೀಕೃತವಾಗುದಿಲ್ಲವೋ ಅವರು ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.


ಇಲ್ಲವೇ ಹತ್ತಿರದ ಅಂಚೆ ಕಚೇರಿಗೆ ಭೇಟಿ ಮಾಡಿ ಪೋಸ್ಟಲ್ ಅಕೌಂಟ್ ಓಪನ್ ಮಾಡುವ ಮೂಲಕವೂ ಇ-ಕೆವೈಸಿ ಅಪ್​​ಡೇಟ್​ ಮಾಡಬಹುದು.



Bình luận


bottom of page