top of page

ಬಿಎಂಟಿಸಿ ಬಸ್ ಹರಿದು ಅಪ್ಪನೊಂದಿಗೆ ಶಾಲೆಗೆ ಹೋಗುತ್ತಿದ್ದ ಎಲ್‌ಕೆಜಿ ಬಾಲಕಿ ಸಾವು

  • Writer: DoubleClickMedia
    DoubleClickMedia
  • Aug 16, 2023
  • 1 min read

Purvi

ಬೆಂಗಳೂರು, ಆಗಸ್ಟ್ 16: ಬಿಎಂಟಿಸಿ ಬಸ್ ಹರಿದು ನಾಲ್ಕು ವರ್ಷ ವಯಸ್ಸಿನ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ ಕೆಜಿ ವಿದ್ಯಾರ್ಥಿನಿ ಪೂರ್ವಿ ರಾವ್ ಮೃತಪಟ್ಟ ಪುಟ್ಟ ಬಾಲಕಿ.



ಮಗಳನ್ನು ಶಾಲೆಗೆ ಬಿಡಲೆಂದು ಆಕೆಯ ತಂದೆ ಪ್ರಸನ್ನ ಅವರು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದಾಗ ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದಿದೆ. ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಪ್ರಸನ್ನ ಬೈಕ್​ನ ಎಡಬದಿಗೆ ಬಿದ್ದರೆ ಪೂರ್ವಿ ಬೈಕ್​​ನ ಬಲಬದಿ ಬಿದ್ದಿದ್ದಾಳೆ. ಇದೇ ವೇಳೆ ಬಸ್ ಪೂರ್ವಿ ಮೇಲೆ ಹರಿದುಹೋಗಿದೆ ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ.


ಘಟನೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.



ಪ್ರತಿನಿತ್ಯ ತಂದೆಯೇ ಮಗಳನ್ನ ಶಾಲೆಗೆ ಬಿಟ್ಟು ಕೆಲಸಕ್ಕೆ ಹೋಗುತ್ತಿದ್ದರು. ಇಂದು ಸಹ ಅದೇ ರೀತಿ ಮಗಳನ್ನ ಶಾಲೆಗೆ ಬಿಡಲು ಹೋಗಿದ್ದರು. ಮಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.




Comentários


bottom of page