top of page
  • Writer's pictureDoubleClickMedia

ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು ಕೋಮುವಾದಿ ವಿರೋಧಿ ವಿಂಗ್ ಸ್ಥಾಪನೆ: ಗೃಹ ಸಚಿವ ಜಿ ಪರಮೇಶ್ವರ್


ಮಂಗಳೂರು, ಜೂನ್ 6, 2023 - ಕರಾವಳಿ ಪ್ರದೇಶದಲ್ಲಿ ನೈತಿಕ ಪೊಲೀಸ್‌ಗಿರಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸುವ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡುವ ಉದ್ದೇಶದಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ಶೀಘ್ರದಲ್ಲೇ ಕೋಮು ವಿರೋಧಿ ವಿಭಾಗವನ್ನು ಸ್ಥಾಪಿಸಲಿದೆ ಎಂದು ಕರ್ನಾಟಕದ ಗೃಹ ಸಚಿವ ಜಿ. ಪರಮೇಶ್ವರ ಅವರು ತಿಳಿಸಿದ್ದಾರೆ.

G Parameshwar presss meet

ಜೂನ್ 6 ರಂದು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಅವರು, ಕರಾವಳಿ ಭಾಗದಲ್ಲಿ ಶಾಂತಿ ಮರುಸ್ಥಾಪಿಸುವ ಮಹತ್ವವನ್ನು ಒತ್ತಿ ಹೇಳಿದರು. ಕೋಮುವಾದಿ ವಿರೋಧಿ ವಿಭಾಗವು ನೈತಿಕ ಪೊಲೀಸ್‌ಗಿರಿಯಂತಹ ಸಮಸ್ಯೆಗಳನ್ನು ಮಾತ್ರವಲ್ಲದೇ ಕೋಮು ಸೌಹಾರ್ದತೆಯನ್ನು ಕದಡುವ ಇತರ ಚಟುವಟಿಕೆಗಳ ಮೇಲೆ ನಿಗಾ ವಹಿಸಲಿದೆ. ಅಲ್ಲದೇ ಹಿರಿಯ ಪೋಲೀಸ್ ಅಧಿಕಾರಿಗಳು ನಿಯಮಿತವಾಗಿ ಶಾಲೆ, ಕಾಲೇಜುಗಳಂತಹ ಸಂಸ್ಥೆಗಳಿಗೆ ಭೇಟಿ‌ ನೀಡಿ, ಕೋಮು ಸೌಹಾರ್ದತೆಯ ಅಗತ್ಯದ ಕುರಿತು ಜಾಗೃತಿ ಮೂಡಿಸಲಿದ್ದಾರೆ ಎಂದು ಅವರು ತಿಳಿಸಿದರು.


ಮಂಗಳೂರು ಪೊಲೀಸ್ ಕಮಿಷನರೇಟ್ ಹಾಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪೊಲೀಸ್ ಘಟಕಗಳ ಕಾರ್ಯಾಚರಣೆಯನ್ನು ಪರಿಶೀಲಿಸಿದ ನಂತರ ಸಚಿವರು ಈ ಘೋಷಣೆ ಮಾಡಿದರು.


(ಗುಣಮಟ್ಟದ ಪತ್ರಿಕೋದ್ಯಮವನ್ನು ನಿಮಗೆ ತಲುಪಿಸುವುದು ನಮ್ಮ ಆದ್ಯತೆಯಾಗಿದೆ. ತಾಜಾ ಸುದ್ದಿಗಳಿಗಾಗಿ ನಮ್ಮ ಟ್ವಿಟ್ಟರ್ ಖಾತೆಯನ್ನು ಹಿಂಬಾಲಿಸಿ)

Comments


bottom of page