top of page

ಮಂಗಳೂರು: ಹೃದಯಾಘಾತಕ್ಕೆ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಬಲಿ

  • Writer: DoubleClickMedia
    DoubleClickMedia
  • Aug 14, 2023
  • 1 min read

Mangalore

ಮಂಗಳೂರು, ಆ.14: ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಲೋ ಬಿಪಿ ಕಾರಣದಿಂದ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.



ಮೃತ ಯುವತಿ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ ಪುತ್ರಿ ಸುಮಾ (19) ಎಂದು ತಿಳಿದುಬಂದಿದೆ.



ಕೆಲ ದಿನಗಳ ಹಿಂದೆ ಸುಮ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಆ.11 ರಂದು ಮತ್ತೆ ಆರೋಗ್ಯ ಹಾಳಾಗಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಬಳ್ಳಮಂಜದಲ್ಲಿರುವ ತನ್ನ ಅಕ್ಕನ ಮನೆಗೆ ತೆರಳಿದ್ದರು ಅಲ್ಲಿ ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಲೋ ಬಿಪಿ ಉಂಟಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.



Comentarios


bottom of page