ಮಂಗಳೂರು: ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ-ಬ್ಯಾಂಕ್ ಉದ್ಯೋಗಿ ದಾರುಣ ಸಾವು
- DoubleClickMedia
- Jun 22, 2023
- 1 min read

ಮಂಗಳೂರು ಜೂ.22 : ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಸಮೀಪದ ಗುರುಪುರದಲ್ಲಿ ಜೂ 22ರ ಗುರುವಾರ ಬೆಳಗ್ಗೆ ನಡೆದಿದೆ. ಮೃತ ಬೈಕ್ ಸವಾರನನ್ನು ಬಂಟ್ವಾಳ ತಾಲೂಕಿನ ಕರಿಯಂಗಳ ನಿವಾಸಿ ಸಂತೋಷ್ (38) ಎಂದು ಗುರುತಿಸಲಾಗಿದೆ.
ವಾಮಂಜೂರಿನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಗುರುಪುರ ಶಾಖೆಯ ಉದ್ಯೋಗಿಯಾಗಿದ್ದ ಸಂತೋಷ್ ಬೆಳಗ್ಗೆ ತಮ್ಮ ಮನೆಯಿಂದ ಕೆಲಸಕ್ಕೆ ಎಂದಿನಂತೆ ತೆರಳುತ್ತಿದ್ದ ವೇಳೆ ಗುರುಪುರದ ಬ್ಯಾಂಕ್ ಬಳಿ ಘಟನೆ ನಡೆದಿದೆ.
ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸಂತೋಷ್ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತ ಪಟ್ಟಿದ್ದಾರೆ.
Comentários