ಮಂಗಳೂರು: ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟ ವ್ಯಕ್ತಿ
- DoubleClickMedia
- Jul 11, 2023
- 1 min read

ಮಂಗಳೂರು ಜು.11 : ಭೂಮಿ ವಿಚಾರಕ್ಕೆ ಗಲಾಟೆ ನಡೆದು ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಬಾಡಾರಿನಲ್ಲಿ ನಡೆದಿದೆ.
ಬಾಡಾರಿನ ಕೊರಗಕಲ್ಲು ಎಂಬಲ್ಲಿ ಭೂ ವಿಚಾರಕ್ಕೆ ಗಲಾಟೆ ನಡೆದಿದ್ದು ಅಂತಿಮವಾಗಿ ಭೂಮಿಯ ಮಾಲೀಕ ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿದ್ದಾನೆ.
ಬಾಡಾರಿನಲ್ಲಿರುವ ಕೊರಗಜ್ಜನ ಕಟ್ಟೆ ಇದ್ದು, ಸಾರ್ವಜನಿಕರು ಸಮಿತಿ ರಚಿಸಿ ಪ್ರತಿ ವರ್ಷ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕರು ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಈ ವಿವಾದ ಕೆಲವು ವರ್ಷಗಳಿಂದ ನಡೆಯುತ್ತಿತ್ತು. ಆದರೆ ಈಗ ಆ ವ್ಯಕ್ತಿ ಗುಡಿಗೆ ಬೆಂಕಿ ಹಚ್ಚಿದ್ದು, ಇದನ್ನು ಖಂಡಿಸಿದ ಸ್ವಾಮಿ ಕೊರಗಜ್ಜ ಸಮಿತಿಯು ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದೆ.
Comentarios