ಮಂಗಳೂರು: ಅಪಘಾತದಲ್ಲಿ ಸವಾರ ಮೃತಪಟ್ಟ ಪ್ರಕರಣ - ಬಸ್ ತಡೆದು ಸ್ಥಳೀಯರ ಪ್ರತಿಭಟನೆ
- DoubleClickMedia
- Jun 23, 2023
- 1 min read

ಮಂಗಳೂರು, ಜೂ 23: ನಿನ್ನೆ ಗುರುಪುರ ಜಂಕ್ಷನ್ ಬಳಿ ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಇಂದು ಕೈಕಂಬ ಜಂಕ್ಷನ್‌ನಲ್ಲಿ ಬಸ್‌ಗಳನ್ನು ತಡೆಯುವ ಮೂಲಕ ಸ್ಥಳೀಯ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ ಡಿಕ್ಕಿಯಾಗಿ ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಿಂದಾಗಿ ಕೈಕಂಬ ಜಂಕ್ಷನ್ ಸಂಪೂರ್ಣ ಬ್ಲಾಕ್ ಆಗಿದ್ದು, ಮಳೆಯ ನಡುವೆಯೂ ನೂರಾರು ಮಂದಿ ಸೇರಿ ವ್ಯವಸ್ಥೆಯ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಸ್ಥಳಕ್ಕೆ ಬಜಪೆ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಬಸ್ ಗಳನ್ನು ಸ್ಥಳದಿಂದ ತೆರಳಲು ಬಿಡದ ಹಿನ್ನೆಲೆಯಲ್ಲಿ ಮೂಡುಬಿದಿರೆ- ಮಂಗಳೂರು, ಬಜಪೆ, ಪೊಳಲಿ ಬಿಸಿರೋಡ್ ಮೊದಲಾದೆಡೆಗೆ ತೆರಳುವ ಪಯಾಣಿಕರು ಬಸ್ ನಲ್ಲೇ ಸ್ವಲ್ಪ ಹೊತ್ತು ಬಾಕಿಯಾಗುವಂತಾಗಿತ್ತು.
Comments