ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ: ಇಬ್ಬರ ಬಂಧನ
- DoubleClickMedia
- Jul 22, 2023
- 1 min read

ಮಂಗಳೂರು ಜು.21: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೋಲಿಸ್ ಗಿರಿ ಪ್ರಕರಣ ನಡೆದಿದ್ದು, ಸ್ನೇಹಿತರ ಜೊತೆ ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರನ್ನು ಅಳಪೆಯ ದೀಕ್ಷಿತ್ ಅಲಿಯಾಸ್ ದೀಕ್ಷಿತ್ ಅಳಪೆ (32) ಮತ್ತು ಅಳಪೆ ಬಜಾಲ್ ನ ಲಾಯ್ಡ್ ಪಿಂಟೋ (32) ಎಂದು ಗುರುತಿಸಲಾಗಿದೆ.
ಮಂಗಳೂರಿನ ಬ್ಯಾಚುಲರ್ ಆಫ್ ಹಾಸ್ಪಿಟಲ್ ಆ್ಯಡ್ಮೀಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ನಾಲ್ವರು ವಿದ್ಯಾರ್ಥಿನಿಯರು ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ ಶುಕ್ರವಾರ ಸಂಜೆ ಪಣಂಬೂರು ಬೀಚ್‌ಗೆ ಹೋಗಿ ವಾಪಾಸ್ಸು ಬರುತ್ತಿದ್ದರು. ಈ ವೇಳೆ ಅವರನ್ನು ಹಿಂಬಾಲಿಸಿಕೊಂಡು ಬಂದ ಇಬ್ಬರು ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ವಿದ್ಯಾರ್ಥಿನಿಯರನ್ನು ತಡೆದಿದ್ದಾರೆ. ನಂತರ ವಿದ್ಯಾರ್ಥಿ ಮಹಮ್ಮದ್ ಹಫೀಸ್(20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಗಾಯಗೊಂಡ ಹಫೀಜ್ ಪೊಲೀಸರಿಗೆ ದೂರು ನೀಡಿದ್ದು, ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Comments