ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ನಾಮಕರಣ
- DoubleClickMedia
- Jul 18, 2023
- 1 min read

ಬೆಂಗಳೂರು ಜು.18: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟ್ ಇನ್ಕ್ಲೂಸಿವ್ ಅಲೈನ್ಸ್ ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ್ ಸಭೆಯ ಬಳಿಕ ಖರ್ಗೆ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಯಕರು ಈ ನಿರ್ಧಾರ ಘೋಷಿಸಿದರು. ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಖರ್ಗೆ ತಿಳಿಸಿದರು.
26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ. ಮಹಾರಾಷ್ಟ್ರ, ಮುಂಬೈನಲ್ಲಿ ಮತ್ತೆ ಸಭೆ ಸೇರಲಿದ್ದೇವೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್ಗೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ. ಮುಂಬೈನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖರ್ಗೆ ತಿಳಿಸಿದರು.
Comments