top of page

ಪ್ರವಾಸಿಗರ ಗಮನಕ್ಕೆ: ಇಂದಿನಿಂದ ಚಂದ್ರದ್ರೋಣ ಪ್ರರ್ವತಕ್ಕೆ ಪ್ರವೇಶ ನಿರ್ಬಂಧ

  • Writer: DoubleClickMedia
    DoubleClickMedia
  • Jul 28, 2023
  • 1 min read


ಚಿಕ್ಕಮಗಳೂರು, ಜು.28: ಪಶ್ಚಮಘಟ್ಟದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗುತ್ತಿರುವ ಹಿನ್ನಲೆ ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ. ರಸ್ತೆ ತೆರವು ಕಾರ್ಯ ಹಿನ್ನಲೆ ಇಂದಿನಿಂದ ಚಂದ್ರದ್ರೋಣ ಪರ್ವತಕ್ಕೆ ಜು.28ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.


ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನಹಳ್ಳ, ಕೆಮ್ಮಣ್ಣುಗುಂಡಿ, ಸೀತಾಳಯ್ಯನಗಿರಿ ಪ್ರವೇಶಕ್ಕೆ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್​​ ಮಾಹಿತಿ ನೀಡಿದ್ದಾರೆ.


Comments


bottom of page