ಅಪರೇಷನ್ ಹಸ್ತ ಮುನ್ಸೂಚನೆ: ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಕ್ಷೇತ್ರಕ್ಕೆ ಭರ್ಜರಿ ಅನುದಾನ
- DoubleClickMedia
- Aug 22, 2023
- 1 min read

ಬೆಂಗಳೂರು, ಆಗಸ್ಟ್ 22: ರಾಜ್ಯ ರಾಜಕೀಯದಲ್ಲಿ ಇದೀಗ ಅಪರೇಷನ್ ಕಾಂಗ್ರೆಸ್ ಗದ್ದಲ ಜೋರಾಗಿದ್ದು, ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಇದಕ್ಕೆ ಇಂಬು ನೀಡುವಂತೆ ಇದೀಗ ಸಿದ್ದು ಸರ್ಕಾರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಕ್ಷೇತ್ರಕ್ಕೆ ಭರ್ಜರಿ ಅನುದಾನ ನೀಡಿದೆ.
ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರಕ್ಕೆ ಬಿಬಿಎಂಪಿಯಿಂದ ಒಟ್ಟು 7 ಕೋಟಿ
63 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ. ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ ಸೇರಿದಂತೆ ಕುಡಿಯುವ ನೀರಿನ ಯೋಜನೆಗಾಗಿ 7.63 ಕೋಟಿ ಅನುದಾನ ನೀಡಲಾಗಿದೆ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ 1 ಕೋಟಿ 63 ಲಕ್ಷ ರೂ. ಮೀಸಲಿಡಲಾಗಿದೆ. ಹೊಸದಾಗಿ ಬೋರ್ವೆಲ್ ಕೊರೆಸಲು 4 ಕೋಟಿ ರೂಪಾಯಿ ಮೀಸಲು ಹಾಗೂ ನಿರ್ವಹಣೆ ಮಾಡಲು 2 ಕೋಟಿ ರೂಪಾಯಿ ಅನುದಾನ ಮೀಸಲು ಇಡಲಾಗಿದೆ. ಕಾಂಗ್ರೆಸ್ ಸರ್ಕಾರದ ಈ ನಡೆ ಆಪರೇಷನ್ ಹಸ್ತಕ್ಕೆ ಪುಷ್ಠಿ ನೀಡಿದಂತೆ ಕಾಣುತ್ತಿದ್ದು, ಎಸ್‌ಟಿ ಸೋಮಶೇಖರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರಾ ಎಂಬ ಅನುಮಾನ ಮೂಡಿದೆ.
Comments