ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆ: ಟ್ವೀಟ್ ಮೂಲಕ ಬಿಜೆಪಿ ಕಾಲೆಳೆದ ಕಾಂಗ್ರೆಸ್
- DoubleClickMedia
- Jul 1, 2023
- 1 min read

ಬೆಂಗಳೂರು ಜು.1: ಚುನಾವಣೆ ಮುಗಿದು ಭರ್ಜರಿ ಜಯ ಸಾಧಿಸಿದ ಕಾಂಗ್ರೆಸ್ ಪೂರ್ಣ ಸರ್ಕಾರ ರಚನೆಮಾಡಿದ್ದರೂ ಕೂಡ ಬಿಜೆಪಿ ಇನ್ನೂ ವಿಪಕ್ಷ ನಾಯಕರನ್ನು ನೇಮಕ ಮಾಡಿಲ್ಲ.ಈ ಹಿನ್ನೆಲೆ ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದೆ.
"ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಆರ್‌ಎಸ್‌ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ" ಎಂದು ಬಿಜೆಪಿಗೆ ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಕಾಲೆಳೆದಿದೆ.
ಜುಲೈ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಅಷ್ಟೊರಳಗೆ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಬೇಕಿದೆ. ಭಾನುವಾರ ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಯಾಗುವ ಸಾಧ್ಯತೆ ಇದೆ. ವಿಪಕ್ಷ ನಾಯಕನ ರೇಸ್‌ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದ್ದಾರೆ. ಅದಲ್ಲದೇ ಇನ್ನು ಅನೇಕರ ಹೆಸರು ವಿಪಕ್ಷ ನಾಯಕನ ಸ್ಥಾನಕ್ಕೆ ಕೇಳಿಬರುತ್ತಿದೆ.
Comentarios