top of page

ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

  • Writer: DoubleClickMedia
    DoubleClickMedia
  • Jul 18, 2023
  • 1 min read

Port Blair Airport

ಪೋರ್ಟ್ ಬ್ಲೇರ್‌: ಜು.18 :ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜು.18) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್‌ನಲ್ಲಿರುವ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿಗಳು ಮತ್ತು ನಾಗರಿಕ ವಿಮಾನಯಾನ ರಾಜ್ಯ ಸಚಿವ, ಜನರಲ್ (ನಿವೃತ್ತ) ವಿಕೆ ಸಿಂಗ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಪ್ರವಾಸಿಗರು ದಟ್ಟಣೆ ಹೆಚ್ಚಾದ ಕಾರಣ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ 707.73 ಕೋಟಿ ರೂ, ವೆಚ್ಚದಲ್ಲಿ ಹೊಸ ಟರ್ಮಿನಲ್ ಕಟ್ಟಡವನ್ನು ನಿರ್ಮಿಸಿದೆ. ಇದರ ಒಟ್ಟು ನಿರ್ಮಾಣ ವಿಸ್ತೀರ್ಣ 40,837 ಚದರ ಮೀಟರ್‌ ಹೊಂದಿದ್ದು, ಹೊಸ ಟರ್ಮಿನಲ್ ಕಟ್ಟಡವು 1,200 ಪ್ರಯಾಣಿಕರನ್ನು ಮತ್ತು ವಾರ್ಷಿಕವಾಗಿ ಸುಮಾರು 40 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ.



ಕಟ್ಟಡವು ಶೆಲ್ ಆಕಾರದಲ್ಲಿದ್ದು, ಇದು ದ್ವೀಪಗಳ ನೈಸರ್ಗಿಕ ಪರಿಸರದ ಚಿತ್ರಗಳ ಪ್ರದರ್ಶನವನ್ನು ಕೂಡ ಹೊಂದಿದೆ. ಇಡೀ ಟರ್ಮಿನಲ್ ದಿನಕ್ಕೆ 12 ಗಂಟೆಗಳ ಕಾಲ 100 ಪ್ರತಿಶತ ನೈಸರ್ಗಿಕ ಬೆಳಕನ್ನು ಹೊಂದಿರುತ್ತದೆ, ಜತೆಗೆ ಇದರ ಛಾವಣಿಯ ಮೇಲಿನ ಸ್ಕೈಲೈಟ್‌ಗಳ ಮೂಲಕ ಕೂಡ ಬೆಳಕನ್ನು ನೀಡುತ್ತದೆ. ಮೂರು ಅಂತಸ್ತಿನ ಕಟ್ಟಡದಲ್ಲಿ 28 ಚೆಕ್-ಇನ್ ಕೌಂಟರ್‌ಗಳು, ಮೂರು ಪ್ರಯಾಣಿಕರ ಬೋರ್ಡಿಂಗ್ ಸೇತುವೆಗಳು ಮತ್ತು ನಾಲ್ಕು ಕನ್ವೇಯರ್ ಬೆಲ್ಟ್‌ಗಳನ್ನು ಅಳವಡಿಸಲಾಗಿದೆ.



Comments


bottom of page