top of page

ಮೂಡಬಿದ್ರೆ : ಜುಲೈ 12 ರಂದು ಲೋಕಾಯುಕ್ತ ಜನಸಂಪರ್ಕ ಸಭೆ

  • Writer: DoubleClickMedia
    DoubleClickMedia
  • Jul 9, 2023
  • 1 min read

ಮಂಗಳೂರು,ಜು.09: ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಜುಲೈ 12ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.

lokayukta building

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ.


ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧಿಕ್ಷಕರ ಕಚೇರಿ-1: 0824-2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420. ಪೊಲೀಸ್ ನಿರೀಕ್ಷಕರ ಕಚೇರಿ:0824-2427237 ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Comments


bottom of page