top of page
  • Writer's pictureDoubleClickMedia

ಸೌಜನ್ಯ ಪ್ರಕರಣದ ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು: ವಸಂತ ಬಂಗೇರ


VasanthBangera

ಬೆಳ್ತಂಗಡಿ: 'ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು' ಎಂದು ಬೆಳ್ತಂಗಡಿಯ ಮಾಜಿ ಶಾಸಕ ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದಾರೆ.



ಬೆಳ್ತಂಗಡಿಯಲ್ಲಿ ನಡೆದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಸೌಜನ್ಯ ಪ್ರಕರಣವನ್ನು ಪ್ರಸ್ತಾಪಿಸಿದ ಅವರು, ಸೌಜನ್ಯ ಪ್ರಕರಣದ ಗಂಭೀರತೆಯ ಬಗ್ಗೆ ಹೇಳಿದರು.


ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಸಿಬಿಐ ತನಿಖೆಯ ದಾರಿ ತಪ್ಪಿಸಲಾಗಿತ್ತು. ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ. ಸಿದ್ದರಾಮಯ್ಯನವರೂ ಕೆಲವರನ್ನು ತುಂಬಾ ಒಳ್ಳೆಯವರು ಎಂದು ನಂಬಿದ್ದರು. ನನ್ನನ್ನು ಕರೆದು ಹೇಳಿದ್ರು ಇದನ್ನು ಪ್ರಸ್ತಾಪ ಮಾಡಬೇಡ, ಈ ಕೇಸನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದರು. ನಾನು ಸುಮಾರು 1 ಗಂಟೆಗೂ ಅಧಿಕ ಕಾಲ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೆ. ಕೇವಲ ಸೌಜನ್ಯ ಪ್ರಕರಣ ಮಾತ್ರವಲ್ಲ, ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ತಿಳಿಸಿದ್ದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯ ಪ್ರಕರಣವನ್ನು ಸಿಬಿಐಗೆ ವಹಿಸಿದೆ ಎಂದರು.



ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ನನಗಿತ್ತು. ಆದರೆ ಸಿಬಿಐ ತನಿಖೆಯ ಅರ್ಧದಲ್ಲಿ ಇದರಲ್ಲಿ ಮೋಸ ಇದೆ ಅನ್ನೋದು ನನಗೆ ತಿಳಿಯಿತು. ಅದನ್ನ ಈಗ ಸಾರ್ವಜನಿಕವಾಗಿ ನಿಮ್ಮ ಮುಂದೆ ಹೇಳಲು ಸಾಧ್ಯವಿಲ್ಲ. ಆದರೆ ಸಂದರ್ಭ ಬಂದಾಗ ನಾನು ಪ್ರಸ್ತಾಪಿಸಿಯೇ ಸಿದ್ದ.


ಒಂದಲ್ಲ ಒಂದು ದಿನ ಒಂದು ದಿನ ಕಾಲ ಬರುತ್ತದೆ. ಅವತ್ತು ಸೌಜನ್ಯ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು, ಅನ್ಯಾಯ ಮಾಡಿದ್ದು, ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಆದರೆ ನನ್ನನ್ನು ಸಾಯಿಸಿದ್ರು ಸಾಯಿಸಬಹುದು ಎಂದಿದ್ದಾರೆ.



ಸಿದ್ದರಾಮಯ್ಯನವರನ್ನು ಏಕಾಂಗಿಯಾಗಿ ಭೇಟಿಯಾಗಿ ಈ ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕೆಂಬುದನ್ನು ಹೇಳುತ್ತೇನೆ. ಇದನ್ನು ಈ ರೀತಿ ತನಿಖೆ ಮಾಡಬೇಕು, ಇಂತವರನ್ನೇ ತನಿಖೆ ಮಾಡಬೇಕು ಎಂದು ಹೇಳುತ್ತೇನೆ. ಖಾಕಿಯವರನ್ನೂ ಕೈ ಕಾಲು ಕಟ್ಟಿ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯನವರಿಗೆ ತಿಳಿಸುತ್ತೇನೆ. ತಪ್ಪು ಮಾಡಿದವನು ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅದನ್ನು ಅನುಭವಿಸಲೇ ಬೇಕು ಎಂದಿದ್ದಾರೆ.



Commentaires


bottom of page