ಸ್ಪಂದನಾ ನಿಧನ: ಮಲ್ಲೇಶ್ವರಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
- DoubleClickMedia
- Aug 8, 2023
- 1 min read

ಬೆಂಗಳೂರು ಆಗಸ್ಟ್ 8: ಥಾಲ್ಯಾಂಡ್ ಪ್ರವಾಸ ಹೋಗಿದ್ದ ವೇಳೆ ಬ್ಯಾಂಕಾಕ್ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಮಲ್ಲೇಶ್ವರಂ ಆಟ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಪಂದನಾ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್ ತಿಳಿಸಿದ್ದಾರೆ.
ಸ್ಪಂದನಾ ಅವರ ಮೃತದೇಹ ರಾತ್ರಿ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಅಲ್ಲಿಂದ ಸ್ಪಂದನಾ ಅವರ ನಿವಾಸಕ್ಕೆ ಮೃತದೇಹ ಬರಲಿದ್ದು, ಅಲ್ಲಿ ಪೂಜೆಯ ನಂತರ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.
ರಾತ್ರಿಯಿಂದಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಈಡಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಬಿ.ಕೆ ಹರಿಪ್ರಸಾದ್ ಮಾಹಿತಿ ನೀಡಿದ್ದಾರೆ.
ಇಂದು ಬೆಳಗ್ಗೆಯಿಂದಲೂ ಬ್ಯಾಂಕಾಕ್ನಲ್ಲಿ ಒಂದಷ್ಟು ಕಾನೂನಾತ್ಮಕ ಪ್ರಕ್ರಿಯೆಗಳು ನಡೆಯುತ್ತಿವೆ. ಈಗಾಗಲೇ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ನಡೆದಿದೆ. ಬಾಕಿ ಉಳಿದಿರುವ ಪ್ರಕ್ರಿಯೆಗಳು ಇಂದು ಮಧ್ಯಾಹ್ನದ ಒಳಗೆ ಮುಗಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
Comments