ಬೆಂಗಳೂರಿನಲ್ಲಿ ಲೋಕಾರ್ಪಣೆಗೊಂಡಿದೆ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ
- DoubleClickMedia
- Aug 18, 2023
- 1 min read

ಬೆಂಗಳೂರು, ಆಗಸ್ಟ್ 18: ನಗರದ ಕೆಂಬ್ರಿಡ್ಜ್ ಲೇಔಟ್‌ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ಬೆಳಿಗ್ಗೆ ಉದ್ಘಾಟಿಸಿದ್ದಾರೆ.

ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಇದಾಗಿದ್ದು“ಕೇಂಬ್ರಿಡ್ಜ್ ಲೇಔಟ್ ಪಿಒ” ಎಂದು ಹೆಸರಿಸಲಾಗಿದೆ. ಇದೇ ವರ್ಷ ಮಾರ್ಚ್ 21 ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ.
ಎಲ್ ಮತ್ತು ಟಿ (ಲಾರ್ಸೆನ್ ಮತ್ತು ಟೂಬ್ರೊ) ನಿರ್ಮಿಸಿರುವ ಕಟ್ಟಡವು ಸುಮಾರು 1,100 ಚದರ ಅಡಿ ವಿಸ್ತೀರ್ಣದಲ್ಲಿದೆ. 3ಡಿ ತಂತ್ರಜ್ಞಾನ ಅಳವಡಿಸಲು ತೆರಿಗೆ ಸೇರಿ ಸುಮಾರು 26 ಲಕ್ಷ ರೂ. ಖರ್ಚಾಯಿತು. ಇನ್ನು ಪೇವರ್ಸ್, ಡ್ರೈನೇಜ್ ಸಂಪರ್ಕ ಮತ್ತು ನೀರಿನ ಸಂಪರ್ಕದಂತಹ ಇತರ ವೆಚ್ಚಗಳು ಸೇರಿ ಸುಮಾರು 40 ಲಕ್ಷ ರೂಪಾಯಿ ಖರ್ಚಾಗಿದೆ.
Comments