top of page

ಕಾಡ್ಗಿಚ್ಚು ನಂದಿಸಲು ಬಂದಿದ್ದ ವಿಮಾನ ಪತನ, ಇಬ್ಬರು ಪೈಲಟ್​ಗಳು ಸಾವು

  • Writer: DoubleClickMedia
    DoubleClickMedia
  • Jul 26, 2023
  • 1 min read

Greece


ಗ್ರೀಸ್​, ಜು 26 : ಗ್ರೀಸ್​ ನಲ್ಲಿ ಕಾಡ್ಗಿಚ್ಚು ಎಲ್ಲೆಡೆ ಹಬ್ಬಿದ್ದು, ಅದನ್ನು ನಂದಿಸಲು ಬಂದಿದ್ದ ಅಗ್ನಿಶಾಮಕ ವಿಮಾನವು ಮರಕ್ಕೆ ಡಿಕ್ಕಿ ಹೊಡದು ಪತನಗೊಂಡು ಇಬ್ಬರು ಪೈಲಟ್​ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಎವಿಯಾ ದ್ವೀಪದಲ್ಲಿರುವ ಕಾಡಿನಲ್ಲಿ ಬೆಂಕಿ ಹತ್ತಿಕೊಂಡು ಉರಿಯುತ್ತಿತ್ತು. ಅದನ್ನು ನಂದಿಸಲು ಗ್ರೀಕ್ ವಾಟರ್ ಬಾಂಬ್ ವಿಮಾನ ಬಂದಿತ್ತು, ಬೆಂಕಿಗೆ ನೀರು ಹಾಯಿಸುತ್ತಿರುವಾಗ ವಿಮಾನವು ಮರಕ್ಕೆ ಡಿಕ್ಕಿ ಹೊಡೆದು ಸ್ವಲ್ಪ ದೂರ ತೆರಳಿ ಪತನಗೊಂಡಿದೆ, ತಕ್ಷಣವೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಪೈಲಟ್​ಗಳು ಸುಟ್ಟು ಕರಕಲಾಗಿದ್ದಾರೆ. ವಿಮಾನ ಪತನಗೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.







Comments


bottom of page