ತುಂಗಾನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು
- DoubleClickMedia
- Jun 19, 2023
- 1 min read

ಶಿವಮೊಗ್ಗಜೂ,19: ತುಂಗಾನದಿಯಲ್ಲಿ ಈಜಲು ತೆರಳಿದ್ದ ಉಪನ್ಯಾಸಕರಿಬ್ಬರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿ ನಡೆದಿದೆ.
ಪುನೀತ್ (38), ಬಾಲಾಜಿ (36) ನೀರುಪಾಲಾದ ಉಪನ್ಯಾಸಕರು. ಇವರಿಬ್ಬರೂ ಕಾರ್ಕಳದ ನಿಟ್ಟೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಬ್ಬರೂ ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದು, ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು.
ಉಪನ್ಯಾಸಕರಿಬ್ಬರು ಜೊತೆಯಾಗಿ ತುಂಗಾನದಿಯಲ್ಲಿ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮುಳುಗಿದ ಇಬ್ಬರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಇನ್ನೋರ್ವ ಉಪನ್ಯಾಸಕನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Comments