top of page

ಬೆಂಗಳೂರಿನಲ್ಲಿ ನಡೆಯಲಿದೆ ತುಳುನಾಡ ಜಾನಪದ ಕ್ರೀಡೆ ಕಂಬಳ

  • Writer: DoubleClickMedia
    DoubleClickMedia
  • Aug 7, 2023
  • 1 min read

Kambala

ತುಳುನಾಡ ಜಾನಪದ ಕ್ರೀಡೆಯಾದ ಕಂಬಳ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಪ್ರಾರಂಭವಾಗಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ಆರಂಭಗೊಂಡಿದೆ.



ಕಂಬಳ ಕರೆಗೆ ರಾಜ ಮಹಾರಾಜ 'ಜಯಚಾಮರಾಜೇಂದ್ರ ಒಡೆಯರ್‌ ಜೋಡುಕರೆ ಕಂಬಳ' ಎಂದು ಹೆಸರಿಡಲು ತೀರ್ಮಾನಿಸಲಾಗಿದ್ದು, ಈ ಮೂಲಕ ಕಂಬಳ ಕ್ಷೇತ್ರದಲ್ಲಿ ಹೊಸ ಇತಿಹಾಸವೊಂದು ಸೃಷ್ಟಿಯಾಗಲಿದೆ.


ಬೆಂಗಳೂರು ತುಳು ಕೂಟ ಈ ಬಾರಿ 50ನೇ ವರ್ಷಾಚರಣೆ ಸಂಭ್ರಮದಲ್ಲಿದ್ದು, ಇದರ ಸವಿ ನೆನಪಿಗಾಗಿ ಕಂಬಳ ಆಯೋಜನೆಗೆ ನಿರ್ಧರಿಸಲಾಗಿದೆ. ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳದ ರೂವಾರಿ, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಸಿದ್ಧತೆ ನಡೆಯುತ್ತಿದೆ.



ಮೈಸೂರಿನ ಒಡೆಯರ್‌ ಕುಟುಂಬಕ್ಕೆ ಸಂಬಂಧಪಟ್ಟ ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆಗೆ ಮೈಸೂರು ರಾಜಮನೆತನದಿಂದ ಅನುಮತಿ ಸಿಕ್ಕಿದ್ದು, ಸಮಿತಿಯು ಈಗಾಗಲೇ ಎರಡು ಸುತ್ತಿನ ಸಭೆ ನಡೆಸಿದೆ.


ಈಗಾಗಲೇ ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಮಾಡುವ ಕುರಿತು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಅರಮನೆ ಮೈದಾನದಲ್ಲಿ ಸ್ಥಳ ಪರಿಶೀಲನೆ ಮಾಡಲಾಗಿದೆ. ಇನ್ನು ಬೆಂಗಳೂರಿಗೆ ಕೋಣಗಳನ್ನು ರೈಲಿನಲ್ಲಿ ಸಾಗಾಟ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ.



Comments


bottom of page