ಮಂಗಳೂರು-ಮೈಸೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲ್ವೇ ವಿದ್ಯುದ್ದೀಕರಣದ ನಂತರ ಆರಂಭ: ಕಟೀಲ್
- DoubleClickMedia
- Jun 2, 2023
- 1 min read
ಮಂಗಳೂರು, ಜೂನ್, 02, 2023: ಮೈಸೂರು-ಮಂಗಳೂರು ನಡುವೆ ನಡೆಯುತ್ತಿರುವ ರೈಲ್ವೇ ವಿದ್ಯುದ್ದೀಕರಣದ ಕಾಮಗಾರಿಯು ಪೂರ್ಣಗೊಂಡ ಬಳಿಕ ಮಂಗಳೂರು-ಮೈಸೂರು- ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪ್ರಾರಂಭಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಶೀಘ್ರದಲ್ಲೇ ತಿರುವನಂತಪುರಂ ಮತ್ತು ಕಾಸರಗೋಡು ನಡುವೆ ಸಂಚಾರ ನಡೆಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸನ್ನು ಮಂಗಳೂರಿನವರೆಗೆ ವಿಸ್ತರಿಸಲಾಗುವುದು ಎಂದು ಅವರು ನಿನ್ನೆ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನಂತೂರು ಮೇಲ್ಸೇತುವೆ ಯೋಜನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ, ಅದೇ ರೀತಿ ಭೂಸ್ವಾಧೀನ ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ 20 ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿರುವುದರಿಂದ ಬಿಕರ್ನಕಟ್ಟೆ-ಸಾಣೂರು ಹೆದ್ದಾರಿ ಅಗಲೀಕರಣ ಕಾಮಗಾರಿ ವಿಳಂಬವಾಗುತ್ತಿರುವುದಾಗಿ ಅವರು ತಿಳಿಸಿದರು.
ಕೆಪಿಟಿ ಜಂಕ್ಷನ್ ಮೇಲ್ಸೇತುವೆ ಯೋಜನೆಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳನ್ನು ಎನ್‌ಎಚ್‌ಎಐ(NHAI) ಮಂಗಳೂರು ಮಹಾನಗರ ಪಾಲಿಕೆಯೊಂದಿಗೆ (MCC) ಪರಿಹರಿಸಿದ ನಂತರ ಯೋಜನೆಯು ಪ್ರಾರಂಭವಾಗುತ್ತದೆ ಎಂದು ಅವರು ಹೇಳಿದರು.
NH-66 ನಲ್ಲಿ ಕುಳೂರು ಸೇತುವೆ ಯೋಜನೆಯ ಇಬ್ಬರು ಪಾಲುದಾರರ ನಡುವಿನ ಹಣಕಾಸಿನ ಸಮಸ್ಯೆಗಳಿಂದಾಗಿ ಅಲ್ಲಿ ಕಾಮಗಾರಿ ಸ್ಥಗಿತಗೊಂಡಿತ್ತು. ಸಮಸ್ಯೆಗಳನ್ನು ಪರಿಹರಿಸಿದ್ದರಿಂದ ಒಬ್ಬ ಪಾಲುದಾರ ಮಾತ್ರ ಯೋಜನೆಯನ್ನು ಮುಂದುವರಿಸುತ್ತಾರೆ ಎಂದು ವಿವರಿಸಿದರು. ಅಲ್ಲದೇ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೂ ಶಂಕುಸ್ಥಾಪನೆ ಸದ್ಯದಲ್ಲೇ ನಡೆಯಲಿದೆ ಎಂದರು.
Comments